ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾನವೀಯ ನ್ಯಾಯಕ್ಕಾಗಿ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ

Posted On: 28-02-2021 05:56PM

ಉಡುಪಿ : ಸಾಮಾಜಿಕ ಹೋರಾಟವನ್ನು ಮಾಡುತ್ತಾ ಪತ್ನಿ, ಮೂವರು ಚಿಕ್ಕ ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಈ ಕುರಿತು ಪೋಲಿಸ್ ಠಾಣೆಗೆ ಹಾಗೂ ವರಿಷ್ಠಾಧಿಕಾರಿಗೆ ದೂರು ದಾಖಲಿಸಿದ್ದರೂ ಯಾವುದೇ ಕ್ರಮಕೈಗೊಂಡಿರುವುದಿಲ್ಲ. ಆದುದರಿಂದ ಸಮಾನ ಮನಸ್ಕ ಬಿಲ್ಲವರನ್ನು ಕೂಡಿಕೊಂಡು ಮಾನವೀಯ ನೆಲೆಯಲ್ಲಿ ಶಂಕರ ಶಾಂತಿಗೆ ನ್ಯಾಯವನ್ನು ಆಗ್ರಹಿಸಿ ಮಾಚ್೯ 1, ಸಂಜೆ 3 ಗಂಟೆಗೆ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಬನ್ನಂಜೆ ಬಿಲ್ಲವ ಸಂಘದ ವಠಾರದಿಂದ ಎಸ್‌ಪಿ ಕಚೇರಿಯತ್ತ ತೆರಳಿದ್ದೇವೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.