ಉಡುಪಿ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಉಡುಪಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗ ವಾಗಿ ತೆರೆಮರೆಯಲ್ಲಿ ಸಮಾಜ ಸೇವೆ ಮಾಡುತ್ತಿರುವ ಶ್ರೀಮತಿ ಬೇಬಿ ರಮೇಶ್ ಪೂಜಾರಿಯವರನ್ನು ಬ್ರಹ್ಮಾವರ ಗ್ರಂಥಾಲಯದಲ್ಲಿ ಫಲ ಪುಷ್ಪ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಜಿಲ್ಲಾಧ್ಯಕ್ಷರಾದ ಪ್ರವೀಣ್ ಎಮ್ ಪೂಜಾರಿ,
ಗೌರವಧ್ಯಕ್ಷರಾದ ದಿವಾಕರ್ ಸನಿಲ್, ಉಪಾಧ್ಯಕ್ಷರಾದ ಎಮ್. ಮಹೇಶ್ ಕುಮಾರ್, ವರಾಂಬಳ್ಳಿ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಪಂಚಾಯತ್ ಸದಸ್ಯರಾದ ನಿತ್ಯಾನಂದ ಬಿ. ಆರ್, ವರಾಂಬಳ್ಳಿ ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪೂಜಾರಿ,
ವೇದಿಕೆಯ ಗೌರವ ಸಲಹೆಗಾರರು ಹಾಗೂ ಪಂಚಾಯತ್ ಸದಸ್ಯರಾದ ವಿಶು ಕಲ್ಯಾಣಪುರ,
ಜತೆ ಕಾರ್ಯದರ್ಶಿ ವಿಜಯ ಕೋಟಿಯನ್,
ಸದಸ್ಯರಾದ ನಿತೀಶ್ ಪೂಜಾರಿ ಹಾಗೂ ಮಹಿಳಾ ಸದಸ್ಯರು ಭಾಗವಹಿದ್ದರು.