ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಸಂತ ಮೇರಿ ಕಾಲೇಜಿನ ಸತ್ಯಸುಬ್ರಹ್ಮಣ್ಯ ವಿ.ಎಸ್ ಗೆ ಗಣಕ ವಿಜ್ಞಾನ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್

Posted On: 25-03-2021 03:57PM

ಶಿರ್ವ: ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ, ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯಸುಬ್ರಹ್ಮಣ್ಯ ವಿ.ಎಸ್. ರವರು ಮಂಗಳೂರು ವಿಶ್ವವಿದ್ಯಾನಿಲಯ 2020 ರ ಸಪ್ಟೆಂಬರ್‍ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಗಣಕ ವಿಜ್ಞಾನ ವಿಭಾಗ ಬಿ.ಸಿ.ಎ. ದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ.

ಕಾಸರಗೋಡಿನ ಶ್ರೀ ವೆಂಕಟೇಶ್ವರ ಭಟ್ ಮತ್ತು ಶ್ರೀಮತಿ ಗೌರಿ ಅವರ ಪುತ್ರರಾದ ಅವರು ಶೇಕಡಾ 95.72% ಅಂಕಗಳೊಂದಿಗೆ ನಾಲ್ಕನೇ ರ‍್ಯಾಂಕ್ ಗಳಿಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.